ಬೆಂಗಳೂರು : ನಟಿ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದುರ್ವಿಧಿ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ಹಾಗೂ ಭಾವನಾ ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.
ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿದೆ. ಈ ವೇಳೆ ಒಂದು ಮಗು ಮೃತಪಟ್ಟಿದೆ. ಇದೀಗ ಹೆಣ್ಣು ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
40 ವರ್ಷದ ಕನ್ನಡದ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಮದುವೆಯಾಗದೆ ಸಿಂಗಲ್ ಮದರ್ ಆಗಿ ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳನ್ನು ತಮ್ಮ ಜೀವನಕ್ಕೆ ಬರಮಾಡಿಕೊಂಡಿದ್ದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಒಂದು ಮಗು ಸಾವನ್ನಪ್ಪಿದೆ.