ಚಂದನವನದ ನಟಿ ಪ್ರಣಿತಾ ಸುಭಾಷ್ (Pranitha Subhash) ಪ್ಯಾರಿಸ್ (Paris) ಬೀದಿಯಲ್ಲಿ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ನಟಿಯ ಲುಕ್ ಕಂಡು ಶಾಕ್ ಆಗಿದ್ದಾರೆ.

ಎರಡು ಮಕ್ಕಳ ತಾಯಿಯಾಗಿದ್ದರೂ ನಟಿಯ ಗ್ಲಾಮರ್ ಇನ್ನೂ ಕಡಿಮೆಯಾಗಿಲ್ಲ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಪ್ರಣಿತಾ ಪ್ಯಾರಿಸ್ ನಲ್ಲಿ ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಲೈಟ್ ಅರೇಂಜ್ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಒಳಉಡುಪು ಧರಿಸಿ, ಅದರ ಮೇಲೆ ಕೋಟ್ ಹಾಗೂ ಪ್ಯಾಂಟ್ ಧರಿಸಿದ್ದಾರೆ. ವಿವಿಧ ಭಂಗಿಯಲ್ಲಿ ಪ್ರಣಿತಾ ಪೋಸ್ ನೀಡಿದ್ದಾರೆ. ನಟಿಯ ಬೋಲ್ಡ್ ಅವತಾರಕ್ಕೆ ಬಗೆ ಬಗೆಯ ಕಾಮೆಂಟ್ ಗಳನ್ನು ಅಭಿಮಾನಿಗಳು ಮಾಡುತ್ತಿದ್ದಾರೆ.

ಪ್ರಣಿತಾ ಸುಭಾಷ್ ತಾಯಿಯಾದ್ಮೇಲೆ ನಿಮ್ಮ ಅಂದ ಹೆಚ್ಚಾಯ್ತಾ? ಎಂದೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ. ಪ್ರಣಿತಾ, ಉದ್ಯಮಿ ನಿತಿನ್ ಜೊತೆ 2021ರಲ್ಲಿ ಹಸೆಮಣೆ ಏರಿದರು. ಅವರ ಸುಂದರ ದ್ಯಾಂಪತ್ಯಕ್ಕೆ ಇಬ್ಬರೂ ಮಕ್ಕಳು ಸಾಕ್ಷಿಯಾಗಿದ್ದಾರೆ.