ಬೆಂಗಳೂರು: ಕನ್ನಡದ ಕಿರುತೆರೆ ನಟಿ ಪ್ರಿಯಾಂಕಾ ಚಿಂಚೋಳಿ ಮನೆಯಲ್ಲಿ ಇದೀಗ ಸಂಭ್ರಮ ಮನೆ ಮಾಡಿದೆ. ನಟಿ ಪ್ರಿಯಾಂಕ ಈಗ ಹೆಣ್ಣು ಮಗುವಿನ ತಾಯಿಯಾಗಿದ್ದು, ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಹರ ಹರ ಮಹಾದೇವ, ಮನಸೆಲ್ಲಾ ನೀನೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪ್ರಿಯಾಂಕಾ ಚಿಂಚೋಳಿ ಕಳೆದ ಜನವರಿಯಲ್ಲಿ ಸೀಮಂತ ಕಾರ್ಯ ಮಾಡಿಕೊಂಡಿದ್ದರು. ಇದೀಗ ಲಂಡನ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳ ಕಾಲಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ವಿಷಯವನ್ನು ರಿವೀಲ್ ಮಾಡಿದ್ದಾರೆ. ದಂಪತಿಗೆ ಆಪ್ತರು, ನೆಟ್ಟಿದರು ಸೇರಿದಂತೆ ಅಭಿಮಾನಿಗಳು ಶುಭ ಕೋರಿದ್ದಾರೆ.
ಮನಸಾರೆʼ, ʻಮನಸೆಲ್ಲಾ ನೀನೆʼ, ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದ ಪ್ರಿಯಾಂಕಾ ಅವರಿಗೆ ʻಹರ ಹರ ಮಹಾದೇವʼ ಧಾರಾವಾಹಿಯ ಸತಿ ಪಾತ್ರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ತಂದುಕೊಟ್ಟಿದೆ. ಪ್ರಿಯಾಂಕಾ ಮೂಲತಃ ಕಲಬುರಗಿಯವರು. ಪ್ರಿಯಾಂಕ ಚಿಂಚೋಳಿ ಅವರು ರಾಕೇಶ್ ಎಂಬುವವರನ್ನು ವಿವಾಹವಾಗಿದ್ದಾರೆ. ಮದುವೆಯ ನಂತರ ಪ್ರಿಯಾಂಕ ಬಣ್ಣದ ಲೋಕದಿಂದ ದೂರ ಸರಿದಿದ್ದರು.