ಮಂಗಳೂರು : ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್, ನಟಿ ರಚಿತಾ ರಾಮ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ.
ನಟಿ ರಚಿತಾ ರಾಮ್ ಅವರು ಬಣ್ಣದ ಬದುಕಿಗೆ ಕಾಲಿಟ್ಟು ಇತ್ತೀಚೆಗೆ 14 ವರ್ಷಗಳಾಗಿದ್ದು, ಈ ವಿವೇಷ ಸಂದರ್ಭದಲ್ಲಿ ಅವರು ಕೊರಗಜ್ಜ ದೈವಕ್ಕೆ ಕೋಲ ಸೇವೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವು ಕೊರಗಜ್ಜ ಕ್ಷೇತ್ರದಲ್ಲಿ ಕೋಲ ಸೇವೆ ಸಲ್ಲಿಸಿದ್ದಾರೆ. ನೆನೆಸಿದ ಕೆಲಸಗಳು ನೆರವೇರಿಸಿದ್ರೆ ಕೊರಗಜ್ಜ ದೈವಕ್ಕೆ ಕೋಲ ಸೇವೆಯ ಹರಕೆಯನ್ನು ನಟಿ ರಚಿತಾ ರಾಮ್ ಹೊತ್ತಿದ್ದರಂತೆ. ಅದರಂತೆ ಈಗ ಸೇವೆ ಸಲ್ಲಿಸುವ ಮೂಲಕ ದೈವದ ಆಶೀರ್ವಾದ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್‌ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿರುವ ರಚಿತಾ ರಾಮ್ ಸದ್ಯ ಧ್ರುವ ಸರ್ಜಾ ಜೊತೆ ಕ್ರಿಮಿನಲ್, ನಿನಾಸಂ ಸತೀಶ್ ಜೊತೆ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದು, ತಮಿಳಿನಲ್ಲಿ ದೊಡ್ಡ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆಯಲ್ಲಿದ್ದಾರೆ. ತೆಲುಗಿನಲ್ಲಿ ಎರಡು ಸಿನಿಮಾಗಳು ಈ ತಿಂಗಳಲ್ಲಿ ಅನೌನ್ಸ್ ಆಗಲಿದೆ ಎನ್ನಲಾಗಿದೆ.
ಇದನ್ನೂ ಓದಿ : ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ CDACಯಲ್ಲಿ 60 ಹುದ್ದೆಗಳ ನೇಮಕಾತಿ!



















