ಬೆಂಗಳೂರು: ಚಂದನವನದಲ್ಲಿ ಭಾರೀ ಸದ್ದು ಮಾಡಿದ್ದ ಡ್ರಗ್ಸ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ನಟಿ ರಾಗಿಣಿ ಹಾಗೂ ಸಂಜನಾಗೆ ಮತ್ತೆ ಸಂಕಷ್ಟ ಶುರುವಾಗಿದೆ.
ಸ್ಯಾಂಡಲ್ ವುಡ್ ಸುಂದರಿಯರಿಗೆ ಮತ್ರೆ ಡ್ರಗ್ಸ್ ಸಂಕಷ್ಟ ಶುರುವಾಗಿದ್ದು, ಹೈಕೋರ್ಟ್ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂ ಮೊರೆ ಹೋಗಲಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಬೆಂಗಳೂರು ಪೊಲೀಸರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ.
ರಾಜ್ಯ ಗೃಹ ಇಲಾಖೆಯ ಅನುಮತಿ ಪಡೆದು ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಗೃಹ ಇಲಾಖೆಯ ಕಾನೂನು ವಿಭಾಗದ ಅನುಮತಿ ಸಿಗುತ್ತಿದ್ದಂತೆ ಅರ್ಜಿ ಅರ್ಜಿ ಸಲ್ಲಿಕೆಯಾಗಲಿದೆ. ಹೀಗಾಗಿ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ್ದ ನಟಿ ರಾಗಿಣಿ, ಸಂಜನಾಗೆ ಮತ್ತೆ ತಲೆನೋವು ಶುರುವಾಗಿದೆ.
ಇತ್ತೀಚೆಗಷ್ಟೇ ನಟಿ ರಾಗಿಣಿ ಹಾಗೂ ಸಂಜನಾ ವಿರುದ್ಧದ ಡ್ರಗ್ಸ್ ಕೇಸ್ ನ್ನು ಹೈಕೋರ್ಟ್ ರದ್ದು ಮಾಡಿತ್ತು. ಇಬ್ಬರ ಮೇಲಿನ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿತ್ತು. ಸದ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪೊಲೀಸರು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.