ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಸಂದೇಶ, ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ವಿಜಯಪುರ ಮೂಲದ ಸಂತೋಷ್ ಎಂಬಾತ ಬಂಧನಕೊಳಪಟ್ಟ ವ್ಯಕ್ತಿ.
ಆರೋಪಿ ಸಂತೋಷ್ ಗಾರೆ ಕೆಲಸ ಮಾಡಿಕೊಂಡಿದ್ದಾನೆ. ಸಾಮಾಜಿಕ ಜಾಲತಾಣಗಳ ಮೂಲಕ ನಟಿ ರಮ್ಯಾಗೆ “ನಮ್ ಬಾಸ್ ತಂಟೆಗೆ ಬರಬೇಡ ……..” ಎಂದು ಅಶ್ಲೀಲ ಪದಗಳನ್ನು ಬಳಸಿ ಸಂದೇಶ ಕಳುಹಿಸಿದ್ದ.
ಸದ್ಯ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಐಪಿ ಅಡ್ರೆಸ್ ಮೂಲಕ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.



















