ಬೆಂಗಳೂರು: ದುಬೈನಿಂದ ಅಕ್ರಮವಾಗಿ ತರುತ್ತಿದ್ದ ಚಿನ್ನವನ್ನು ಸಾಗಾಣಿಕೆ ಮಾಡಲು ಸಾಹಿಲ್‌ಗೆ ವಾಟ್ಸಾಪ್ ಮೂಲಕ ಮೆಸೇಜ್ ನಟಿ ರನ್ಯಾ ರಾವ್ ಮಾಡುತ್ತಿದ್ರು ಎಂಬ ಸ್ಫೋಟಕ ವಿಷಯ ಹೊರಬಿದ್ದಿದೆ.
ಸದ್ಯ ಪೊಲೀಸರ ಅತಿಥಿಯಾಗಿರುವ ನಟಿ ರನ್ಯಾ ರಾವ್, ವಿಚಾರಣೆ ವೇಳೆ ತಾನು ಸಾಹಿಲ್‌ಗೆ ಮೆಸೇಜ್ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೋಟೋಕಾಲ್ ದುರುಪಯೋಗವಾಗಿದ್ದು ದೃಢ ಪಟ್ಟಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಅವರಿಗೆ ವರದಿ ನೀಡುವಂತೆ ತಿಳಿಸಿತ್ತು. ತನಿಖೆ ನಡೆಸಿ ಗೌರವ ಗುಪ್ತಾ ವರದಿ ಸಲ್ಲಿಸಿದ್ದಾರೆ. ತನಿಖೆಯಲ್ಲಿ ರನ್ಯಾರಾವ್ ಪ್ರೋಟೋಕಾಲ್ ಉಲ್ಲಂಘನೆ ಮಾಡಿರುವುದು ದೃಢ ಪಟ್ಟಿದೆ. ಡಿಜಿಪಿ ಮಗಳು ಎಂದು ಹೇಳಿಕೊಂಡು ಪ್ರೋಟೋಕಾಲ್ ಉಲ್ಲಂಘನೆ ಮಾಡಿದ್ದಾರೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ರನ್ಯಾ ರಾವ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್, ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.