ಬೆಂಗಳೂರು : ಅಭಿನಯ ಸರಸ್ವತಿ ಬಿ. ಸರೋಜಾದೇವಿ ಇಹಲೋಕ ತ್ಯಜಿಸಿ ದಿನಗಳಾಗಿವೆ. ಕಳೆದ ಜುಲೈ 14ರಂದು ಬೆಳಗ್ಗೆ ವಯೋಸಹಜ ಕಾಯಿಲೆಯಿಂದಾಗಿ ನಿಧನರಾದ್ದರು.
ಈಗ 11ನೇ ದಿನದ ಕಾರ್ಯಗಳನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದು, ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಜುಲೈ 25 ರಂದು ನಡೆಯಲಿದೆ.
ಮಲ್ಲೇಶ್ವರಂನಲ್ಲಿ ಇರುವ ‘ರುದ್ರಮ್ಮ’ ನಿವಾಸದಲ್ಲಿ ಸಮಾರಾಧನೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿದ್ದು, ಭಾರತೀಯ ಚಿತ್ರರಂಗ ಕಂಡ ಮೊದಲ ಲೇಡಿ ಸೂಪರ್ ಸ್ಟಾರ್ ಅನ್ನು ಅಂದು ಸ್ಮರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಹುಭಾಷಾ ಚಿತ್ರರಂಗದ ಕಲಾವಿದರು, ತಂತ್ರಜ್ಞರು, ರಾಜಕಾರಣಿಗಳು ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.