ಕನ್ನಡದ ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ವೈಷ್ಣವಿ ಗೌಡ ಸೀತಾರಾಮ ಸೀರಿಯಲ್ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಇದೀಗ ನಟಿ ವೈಷ್ಣವಿ ಗೌಡ ಅನುಕೂಲ್ ಮಿಶ್ರ ಜೊತೆ ಸಪ್ತಪದಿ ತುಳಿದಿದ್ದು ಮದುವೆಯ ಸುಂದರ ಕ್ಷಣದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ವೈಷ್ಣವಿ ಕೊನೆಗೂ ಹಸೆಮಣೆ ಏರಿದ್ದು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲದಂತಾಗಿದೆ. ವೈಷ್ಣವಿ ಗೌಡ ಅವರು ಮದುವೆ ಆಗಿರುವ ಹುಡುಗ ಅನುಕೂಲ್ ಮಿಶ್ರಾ. ಏರ್ಫೋರ್ಸ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅನುಕೂಲ್ ಮಿಶ್ರಾ ಮತ್ತು ವೈಷ್ಣವಿ ಗೌಡ ಅವರದ್ದು ಲವ್ ಮ್ಯಾರೇಜ್ ಅಲ್ಲ, ಅಪ್ಪಟ ಅರೇಂಜ್ ಮ್ಯಾರೇಜ್ ಆಗಿದೆ. ಈ ಮದುವೆಗೆ ಅಮೂಲ್ಯ, ವಿಜಯ್ ಸೂರ್ಯ, ನಿವೇದಿತಾ ಗೌಡ, ಅಲೋಕ್, ಕಾರುಣ್ಯ ರಾಮ್ ಮುಂತಾದ ಸೆಲೆಬ್ರಿಟಿಗಳು ಹಾಜರಾಗಿದ್ದರು.
ಮದುವೆಯಲ್ಲಿ ಸೆಲೆಬ್ರಿಟಿಗಳೆಲ್ಲ ಕುಣಿದು ಕುಪ್ಪಳಿಸಿದ್ದು ವೈಷ್ಣವಿ ಗೌಡ ವಿವಾಹ ಅದ್ದೂರಿಯಾಗಿ ನಡೆದಿದೆ. ಮದುವೆ ಫೋಟೋಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಶುಭ ಹಾರೈಸಿದ್ದಾರೆ.