ಬೆಂಗಳೂರು: ತಿರು ಓಣಂ ಹಬ್ಬದ ಹಿನ್ನೆಲೆಯಲ್ಲಿ ಸೆ. 2 ರಿಂದ 4ರವರೆಗೆ ಬೆಂಗಳೂರಿನಿಂದ ಕೇರಳ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಕೆಎಸ್ ಆರ್ ಟಿಸಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಹಾಲಿ ಕಾರ್ಯಾನಿರ್ವಹಿಸುತ್ತಿರುವ ಬಸ್‌ಗಳ ಜೊತೆಗೆ 90 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ನಂತರ ಕೇರಳ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ ಬರಲು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳದ ಕಣ್ಣೂರು, ಕೋಜಿಕೋಡ್. ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರಂಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರು www.ksrtc.karnataka.gov.in ಮುಖಾಂತರ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗಿದ್ದು, ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯು ಮಾಹಿತಿ ತಿಳಿಸಿದೆ.