ಬೆಂಗಳೂರು: ನೀವು ಪದವಿ ಮುಗಿಸಿ ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿದ್ದೀರಾ? ಹಾಗಾದರೆ ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಏರ್ ಪೋರ್ಟ್ಸ್ ಎಕನಾಮಿಕ್ ರೆಗ್ಯುಲೇಟರಿ ಅಥಾರಿಟಿಯಲ್ಲಿ (AERA Recruitment 2026) ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 9 ಕನ್ಸಲ್ಟಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ನೇಮಕಾತಿ ಸಂಸ್ಥೆ: ಏರ್ ಪೋರ್ಟ್ಸ್ ಎಕನಾಮಿಕ್ ರೆಗ್ಯುಲೇಟರಿ ಅಥಾರಿಟಿ (AERA)
ಒಟ್ಟು ಹುದ್ದೆಗಳು: 9
ಉದ್ಯೋಗ ಸ್ಥಳ: ನವದೆಹಲಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 7
ಜೂನಿಯರ್ ರಿಸರ್ಚ್ ಅಸೋಸಿಯೇಟ್, ಕನ್ಸಲ್ಟಂಟ್ ಹಾಗೂ ಜೂನಿಯರ್ ಕನ್ಸಲ್ಟಂಟ್ ತಲಾ 3 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸಿಎ, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಮೂಹ ಸಂದರ್ಶನ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aera.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Deputy Chief Airports Economic Regulatory Authority of India, 3rd Floor, Udaau Blawan, Safdarjung Airport, New Delhi-110003
ಇದನ್ನೂ ಓದಿ: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಬೆಂಗಳೂರಿನಲ್ಲೇ ಉದ್ಯೋಗ



















