ಬೆಂಗಳೂರು: ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು ಎನ್ನುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (AFMS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 225 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 225 ವೈದ್ಯಕೀಯ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು
ಒಟ್ಟು ಹುದ್ದೆಗಳು: 225
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 03
ನೇಮಕಾತಿಯ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೆಪ್ಟೆಂಬರ್ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ join.afms.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ತಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು, ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



















