ಬೆಂಗಳೂರು: ಕೇಂದ್ರ ಸರ್ಕಾರದ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (AFMS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಮಿ ಡೆಂಟಲ್ ಕಾರ್ಪ್ಸ್ ಪೋಸ್ಟ್ ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು
ಒಟ್ಟು ಹುದ್ದೆಗಳು: 30
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ನೇಮಕಾತಿ ಹೊಂದಿದವರಿಗೆ ಮಾಸಿಕ 61,300 ರೂಪಾಯಿಯಿಂದ 1,20,900 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ನೇಮಕಾತಿಯ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಡಿಎಸ್, ಎಂಡಿಎಸ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 200 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ನೀಟ್ ಅಂಕಗಳು, ದಾಖಲೆ ಪರಿಶೀಲನೆ, ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು join.afms.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.