ಕಾರವಾರ: ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 8 ವರ್ಷಗಳ ನಂತರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸಿದ್ದಾಪುರ ತಾಲೂಕಿನ ಹಾಲ್ಕಣಿ ಎಂಬಲ್ಲಿ ಕಳೆದ 8 ವರ್ಷದ ಹಿಂದೆ ವ್ಯಕ್ತಿಯೊಬ್ಬನ ಕೊಲೆ ನಡೆದಿತ್ತು. ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಉತ್ತರಾಖಂಡ ಮೂಲದ ಆರೋಪಿಯನ್ನ ಸಿದ್ದಾಪುರ ಪೊಲೀಸರು ಬಂಧಿಸಿ, ಕರೆತಂದಿದ್ದಾರೆ.
2016 ರಲ್ಲಿ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಲ್ಕಣಿ ಎಂಬಲ್ಲಿ ಶರತ್ ಗಣೇಶ ಆಚಾರಿ ಎಂಬುವವರನ್ನ ಭರತ್ ಸಿಂಗ್ ಹಾಗೂ ದಿಲ್ ರಾಜ್ ಸೇರಿ ಕೊಲೆ ಮಾಡಿದ್ದರು. ನಂತರ ದಿಲ್ ರಾಜ್ ಎಂಬಾತನನ್ನ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಆದರೆ, ಪ್ರಮುಖ ಆರೋಪಿಯಾಗಿದ್ದ ಭರತ್ ಸಿಂಗ್ ಕೊಲೆ ಮಾಡಿ ಪರಾರಿಯಾಗಿದ್ದ. ಈಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.