ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ(Prajwal Revanna)ಗೆ ಮತ್ತೆ ಸಂಕಷ್ಟ ಶುರುವಾಗಿದೆ.
ಮತ್ತೆ ಪ್ರಜ್ವಲ್ ರೇವಣ್ಣನನ್ನು ಜೂನ್ 18ರ ವರೆಗೆ ಎಸ್ ಐಟಿ ಕಸ್ಟಡಿಗೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಇಂದು(ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿ ಆತನನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು. ಎಸ್ ಐಟಿ ಅಧಿಕಾರಿಗಳ ಮನವಿ ಪುರಸ್ಕರಿಸಿದ ಕೋರ್ಟ್ ಕಸ್ಟಡಿಗೆ ನೀಡಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಹೀಗಾಗಿ ಜೈಲಿಗೆ ಕಳುಹಿಸಿ, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿತ್ತು.
ಪ್ರಜ್ವಲ್ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದ. ಜೈಲಿನಲ್ಲಿ ಪ್ರಜ್ವಲ್ ಮುದ್ದೆ, ಅನ್ನ, ಸಾಂಬರು, ಪಲ್ಯ ಸೇವಿಸುತ್ತಿದ್ದ.
