ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗುರುವಾರ ತಡ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್’ನ್ನು ಯಶಸ್ವಿಯಾಗಿ ಅಳವಡಿಸಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದು ತಿಳಿದು ಬಂದಿದೆ.
ಚೇತರಿಸಿಕೊಳ್ಳುತ್ತಿದ್ದ ಖರ್ಗೆ ಅವರು ಶುಕ್ರವಾರ(ಅ.3) ದಿಂದ ತಮ್ಮ ದೈನಂದಿನ ಕಾರ್ಯದಲ್ಲಿ ತೊಡಗಿಕೊಳ್ಳುವ ನೀರಿಕ್ಷೆಯಿದೆ ಎಂದು ಅವರ ಮಗ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆ ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಆರೋಗ್ಯ ವಿಚಾರಿಸಿ, ಬಹು ಬೇಗ ಗುಣಮುಖರಾಗುವಂತೆ ಹಾರೈಸಿದ್ದರು. ಇದೀಗ ಆರೋಗ್ಯ ಸುಧಾರಿಸಿದ್ದು, ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ.



















