ಬೆಂಗಳೂರು: ಛತ್ತೀಸ್ ಗಢ ರಾಜಧಾನಿ ರಾಯ್ ಪುರದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 110 ಪೋಸ್ಟ್ ಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 110 ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ರಾಯ್ ಪುರ
ಹುದ್ದೆಯ ಹೆಸರು: ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಇತ್ಯಾದಿ
ಒಟ್ಟು ಹುದ್ದೆ: 110
ಉದ್ಯೋಗ ಸ್ಥಳ: ರಾಯ್ ಪುರ, ಛತ್ತೀಸ್ ಗಢ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್, ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 5
ಎಂಬಿಬಿಎಸ್, ಎಂಡಿ, ಎಂಎಸ್, ಎಂಎಸ್ಸಿ, ಪಿಎಚ್.ಡಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 58 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿವರಿಗೆ 3 ವರ್ಷ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಯಾವ ಹುದ್ದೆ ಎಷ್ಟು ಖಾಲಿ?
ಪ್ರೊಫೆಸರ್ 25
ಅಡಿಷನಲ್ ಪ್ರೊಫೆಸರ್ 23
ಅಸೋಸಿಯೇಟ್ ಪ್ರೊಫೆಸರ್ 34
ಅಸಿಸ್ಟಂಟ್ ಪ್ರೊಫೆಸರ್ 25
ಎಸ್ ಸಿ ಮತ್ತು ಎಸ್ ಟಿ ಸಮುದಾಯದ ಅಭ್ಯರ್ಥಿಗಳು 2,400 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಜನರಲ್, ಇಡಬ್ಲ್ಯೂಎಸ್ ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ 3 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ದಿವ್ಯಾಂಗ (ಪಿಡಬ್ಲ್ಯೂಪಿಡಿ) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಳಾಸ: Recruitment Cell, 2nd Floor, Medical College Building Gate No-5, AIIMS Raipur, G.E. Road, Tatibandh, Raipur-492099 (C.G.).
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ ಸೈಟ್: aiimsraipur.edu.in



















