ಬೆಂಗಳೂರು: ಮೈಸೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಭರ್ಜರಿ ಗುಡ್ ನ್ಯೂಸ್ ಲಭಿಸಿದೆ. ಹೌದು, ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ(AIISH Mysore Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಜೆಕ್ಟ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ನೇಮಕಾತಿ ಸಂಸ್ಥೆ: ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ
ಒಟ್ಟು ಹುದ್ದೆಗಳು: 4
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ನವೆಂಬರ್ 5
ಭಾಷಣ ಮತ್ತು ಶ್ರವಣ ಸಹಾಯಕ, ಸೀನಿಯರ್ ರಿಸರ್ಚ್ ಫೆಲೋ, ಜೂನಿಯರ್ ರಿಸರ್ಚ್ ಫೆಲೋ ಹಾಗೂ ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಎಂಎಸ್ಸಿ ಕೋರ್ಸ್ ಪಡೆದವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ www.aiishmysore.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ಡೀನ್ (ಸಂಶೋಧನಾ) ಕೋಶ, ಸಿಒಇ ಕಟ್ಟಡ, ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಸ್ಪೀಚ್ ಆ್ಯಂಡ್ ಹಿಯರಿಂಗ್, ಮೈಸೂರು.



















