ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಮುರುಗೇಶ್ ಪಾಳ್ಯದಲ್ಲಿರುವ ವಾಯುಪಡೆ ಶಾಲೆಯಲ್ಲಿ (Air Force School ASTE) ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಂತಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಏರ್ ಫೋರ್ಸ್ ಸ್ಕೂಲ್
ಹುದ್ದೆ ಹೆಸರು: ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಇತ್ಯಾದಿ
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 5
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಪೋಸ್ಟ್ ಗ್ರ್ಯಾಜುಯೇಟ್ ಟೀಚರ್, ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್, ಪ್ರೈಮರಿ ಟೀಚರ್, ಹೆಲ್ಪರ್, ಅಕೌಂಟ್ಸ್ ಅಸಿಸ್ಟೆಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಡಿ.ಎಡ್, ಬಿ.ಎಡ್, ಬಿಎ, ಬಿಎಸ್ಸಿ, ಎಂಎ, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕನಿಷ್ಠ 21ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ afsaste.edu.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Air Force School ASTE, GV Camp, Murugeshpalya, Bengaluru – 560017.
ಇದನ್ನೂ ಓದಿ : ಆಭರಣ ಪ್ರಿಯರಿಗೆ ಮತ್ತೆ ಶಾಕ್ | ಚಿನ್ನದ ಇಂದಿನ ದರ ಎಷ್ಟಿದೆ ಗೊತ್ತಾ?


















