ಚೆನ್ನೈ : ಭಾರತೀಯ ವಾಯುಪಡೆಗೆ ಸೇರಿದ Pilatus PC-7 ವಿಮಾನ ಚೆನ್ನೈನಲ್ಲಿ ಪತನವಾಗಿದೆ. ಚೆಂಗಳಪಟ್ಟು ಜಿಲ್ಲೆಯ ತಾಂಬರಂನಲ್ಲಿ ವಿಮಾನ ಪತನವಾಗಿದ್ದು, ಯಾವುದೇ ಅಪಾಯವಿಲ್ಲದೆ ಪೈಲಟ್ ಪಾರಾಗಿದ್ದಾರೆ. ದೈನಂದಿನ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ವಿಮಾನ ಪತನವಾದ ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿರುವ ವಿಡಿಯೊ ವೈರಲ್ ಆಗಿದೆ.
ಅಪಘಾತಕ್ಕೀಡಾದ ವಿಮಾನವು ಪಿಸಿ-7 ಪಿಲಾಟಸ್ ಆಗಿದ್ದು, ಇದು ವಾಯುಪಡೆಯ ಕೆಡೆಟ್‌ಗಳಿಗೆ ಆರಂಭಿಕ ಹಾರಾಟ ತರಬೇತಿ ನೀಡುತ್ತದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಮತ್ತು ವಾಯು ಪಡೆಯ ತುರ್ತು ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು. ಅಪಘಾತಕ್ಕೆ ಕಾರಣವೇನು ಎನ್ನುವುದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲು ವಿಚಾರಣೆ ಆರಂಭಿಸಲಾಗಿದೆ.
ಇದನ್ನೂ ಓದಿ : ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇನಲ್ಲಿ ಡೆಡ್ಲಿ ಆಕ್ಸಿಡೆಂಟ್ | ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು – 5 ಮಂದಿ ಸಾವು


















