ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನರುವ ವಾಯುಪಡೆ ಶಾಲೆಯಲ್ಲಿ (Air Force School Jalhalli Recruitment 2026) ಖಾಲಿ ಇರುವ 26 ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಸೇರಿ 26 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಂತಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಏರ್ ಫೋರ್ಸ್ ಸ್ಕೂಲ್
ಹುದ್ದೆ ಹೆಸರು: ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ ಇತ್ಯಾದಿ
ಒಟ್ಟು ಹುದ್ದೆ: 26
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 11
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ (PGT), ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (PGT), ಹೆಲ್ಪರ್ಸ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಭೌತಶಾಸ್ತ್ರ, ಇಂಗ್ಲಿಷ್, ವಿಜ್ಞಾನ, ದೈಹಿಕ ಶಿಕ್ಷಣ, ಜೀವಶಾಸ್ತ್ರ, ಗಣಿತ ಸೇರಿ ಹಲವು ವಿಷಯಗಳನ್ನು ಬೋಧಿಸುವ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ afsjal.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಕಾರ್ಯನಿರ್ವಾಹಕ ನಿರ್ದೇಶಕ, ವಾಯುಸೇನಾ ಶಾಲೆ ಜಾಲಹಳ್ಳಿ, ಜಾಲಹಳ್ಳಿ ಪೂರ್ವ, ಬೆಂಗಳೂರು-560014
ಇದನ್ನೂ ಓದಿ: ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ


















