ಬೆಂಗಳೂರು : ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿರುವ ಏರ್ ಇಂಡಿಯಾದಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಏರ್ ಕ್ರಾಫ್ಟ್ ಮೆಂಟೇನನ್ಸ್ ಎಂಜಿನಿಯರ್ ಹಾಗೂ ಸೀನಿಯರ್ ಏರ್ ಕ್ರಾಫ್ಟ್ ಮೆಂಟೇನನ್ಸ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಏರ್ ಇಂಡಿಯಾ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಏರ್ ಕ್ರಾಫ್ಟ್ ಮೆಂಟೇನನ್ಸ್ ಎಂಜಿನಿಯರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 10
ಉದ್ಯೋಗ ಸ್ಥಳ: ಬೆಂಗಳೂರು
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆದರೆ, ವಿಮಾನಯಾನದ ಮೆಂಟೇನನ್ಸ್ ವಿಭಾಗದಲ್ಲಿ 3ರಿಂದ 6 ವರ್ಷ ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕಂಪನಿ ಮಾಹಿತಿ ನೀಡಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ airindia.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು



















