ಬೆಂಗಳೂರು : ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿರುವ, ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Air India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಏರ್ ಇಂಡಿಯಾ
ಹುದ್ದೆಗಳ ಹೆಸರು: ಲ್ಯಾಬ್ ಟೆಕ್ನಿಶಿಯನ್
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 20
ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ airindia.com ಗೆ ಭೇಟಿ ನೀಡಬೇಕು
ಲ್ಯಾಬ್ ಟೆಕ್ನಿಶಿಯನ್ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಕೊಹ್ಲಿ ಔಟ್, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು



















