ಬೆಂಗಳೂರು : ದೇಶದ ಪ್ರಮುಖ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿರುವ, ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Air India Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಟ್ರೈನಿ ಕ್ಯಾಬಿನ್ ಕ್ರ್ಯೂ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಏರ್ ಇಂಡಿಯಾ
ಹುದ್ದೆಗಳ ಹೆಸರು: ಟ್ರೈನಿ ಕ್ಯಾಬಿನ್ ಕ್ರ್ಯೂ
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 10
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ airindia.com ಗೆ ಭೇಟಿ ನೀಡಬೇಕು
ಟ್ರೈನಿ ಕ್ಯಾಬಿನ್ ಕ್ರ್ಯೂ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!



















