ಬೆಂಗಳೂರು : ಇಂದಿನಿಂದ ಮುಂದಿನ ಏಳು ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರಭಾಗದ ಬಂಗಾಳ ಉಪ ಸಾಗರದ ಒರಿಸ್ಸಾದ ಕರಾವಳಿಯಲ್ಲಿ ಸೆಪ್ಟೆಂಬರ್ 2 ರಂದು ವಾಯುಭಾರ ಕುಸಿತ ಉಂಟಾಗುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಸೆಪ್ಟೆಂಬರ್ 6 ರವರೆಗೆ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೆಲವು ಕಡೆ ಇಂದಿನಿಂದ ಸೆಪ್ಟೆಂಬರ್ 4 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.


















