ಬೆಂಗಳೂರು : ಫೆಸಿಫಿಕ್ ಸಾಗರದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಮಲೆನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಮಲೆನಾಡು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆ.18 ರಂದು ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ನಿರಂತರ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವುದರಿಂದ ಪ್ರವಾಸ ಯೋಜನೆಯನ್ನು ಮುಂದೂಡುವಂತೆ ಪ್ರವಾಸಿಗರಿಗೆ ಹವಾಮಾನ ಇಲಾಖೆ ಸಲಹೆ ನೀಡಿದೆ.



















