ಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರವಾಗಿ ಹದಗೆಟ್ಟಿದ್ದ ಬೆಂಗಳೂರು ಸೇರಿದಂತೆ ಬಳ್ಳಾರಿ ಹಾಗೂ ಮಂಗಳೂರು ಭಾಗಗಳ ವಾಯು ಗುಣಮಟ್ಟದಲ್ಲಿ ಇಂದು ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ. ಇದರಿಂದ ಜನರು ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂತಾಗಿದೆ.
ಇನ್ನೂ ಉಡುಪಿ ಹಾಗೂ ಮಂಗಳೂರಿನಲ್ಲಿಯೂ ಗಾಳಿಯ ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ. ಕೆಲ ದಿನಗಳ ಹಿಂದಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಇದೀಗ 133ಕ್ಕೆ ತಲುಪಿದೆ.
ಆದಾಗ್ಯೂ, ತಜ್ಞರ ಪ್ರಕಾರ ಈ ಮಟ್ಟದ ವಾಯು ಗುಣಮಟ್ಟ ಇನ್ನೂ ಆರೋಗ್ಯಕರವಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ಮಾನದಂಡಗಳ ಪ್ರಕಾರ, ಈ ಮಟ್ಟದ ಗಾಳಿ ದೀರ್ಘಕಾಲ ಉಸಿರಾಡಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ.
ಒಟ್ಟಾರೆ, ಅಂಕೆಗಳಲ್ಲಿ ಸ್ವಲ್ಪ ಸುಧಾರಣೆ ಕಂಡರೂ, ವಾಯು ಮಾಲಿನ್ಯ ಸಮಸ್ಯೆ ಇನ್ನೂ ಗಂಭೀರವಾಗಿಯೇ ಉಳಿದಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವ ಅಗತ್ಯವಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –133
- ಮಂಗಳೂರು-123
- ಮೈಸೂರು –130
- ಬೆಳಗಾವಿ – 71
- ಕಲಬುರ್ಗಿ-99
- ಶಿವಮೊಗ್ಗ – 104
- ಬಳ್ಳಾರಿ – 154
- ಹುಬ್ಬಳ್ಳಿ- 88
- ಉಡುಪಿ –118
- ವಿಜಯಪುರ –124


















