ಶಿವಮೊಗ್ಗ : ತೀರ್ಥಹಳ್ಳಿಯ ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ನಡೆದಿದೆ.
ಮಾಹಿತಿಗಳ ಪ್ರಕಾರ ಈ ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿತ್ತು ಎನ್ನಲಾಗಿದೆ. ಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಇದ್ದಕ್ಕಿದ್ದಂತೆ ಬಸ್ ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : ಸಿಎಂ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ; ಬೆಂಗಳೂರಿನಾದ್ಯಂತ ಡಿಕೆಶಿ ಫ್ಲೆಕ್ಸ್, ಕಟೌಟ್ಗಳ ದರ್ಬಾರ್!


















