ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಿರುವ ಐಶ್ವರ್ಯಾಗೌಡ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಅಧಿಕಾರಿಗಳಿಗೆ ಸಿಕ್ಕಿವೆ ಎನ್ನಲಾಗಿದೆ. ಈ ವೇಳೆ ಐಶ್ವರ್ಯ ಗೌಡಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಳಗ್ಗೆಯಿಂದ ಐಶ್ವರ್ಯ ಗೌಡ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ನಂತರ ವಶಕ್ಕೆ ಪಡೆದಿದ್ದಾರೆ. ಇಂದೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.



















