ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣ ಪಂಚಾಯತ್ ರಚನೆಯ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದೆ.
ಒಟ್ಟು 11 ಸ್ಥಾನಗಳ ಪೈಕಿ 6 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದರೆ, ತೀವ್ರ ಸ್ಪರ್ಧೆ ನೀಡಿದ ಕಾಂಗ್ರೆಸ್ 5 ಸ್ಥಾನಗಳಲ್ಲಿ ಪ್ರಯಾಸದಾಯಕ ಗೆಲುವು ಸಾಧಿಸಿದೆ.
ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಜಿ. ಹೆಚ್. ಶ್ರೀನಿವಾಸ ಅವರು, ರಾಜ್ಯದಲ್ಲಿ ತಮ್ಮದೇ ಸರಕಾರವಿದ್ದರೂ ಬಿಜೆಪಿ ಮುಂದೆ ಸೋಲೊಪ್ಪಿಕೊಂಡಿದ್ದಾರೆ.