ನವದೆಹಲಿ: ಭಾರತ ಹಾಗೂ ಯುಕೆ ಮಧ್ಯೆ ಉತ್ತಮ ಬಾಂಧವ್ಯ ನಿರ್ಮಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಟನ್ ನ ಕಿಂಗ್ ಚಾರ್ಲ್ಸ್ III ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಹಲವಾರು ವಿಷಯಗಳ ಕುರಿತು ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಕಿಂಗ್ ಚಾರ್ಲ್ಸ್ III ಅವರೊಂದಿಗೆ ಮಾತನಾಡಲು ಸಂತೋಷವಾಗಿದೆ. ಭಾರತ-ಯುಕೆ ಸಂಬಂಧಗಳನ್ನು ಬಲಪಡಿಸುವ ಬದ್ಧತೆಯನ್ನು ನಾನು ಪುನರುಚ್ಚರಿಸಿದೆ. ಕಾಮನ್‌ವೆಲ್ತ್, ಹವಾಮಾನ ಕ್ರಮ ಮತ್ತು ಸುಸ್ಥಿರತೆ ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಅವರಿಗೆ ಉತ್ತಮ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಈ ವೇಳೆ ಪರಸ್ಪರ ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ಬ್ರಿಟನ್‌ನ ರಾಜ ಚಾರ್ಲ್ಸ್ III ಮುಂದಿನ ದಿನಗಳಲ್ಲಿ ಭಾರತಕ್ಕೆ ಅಧಿಕೃತ ಭೇಟಿಗೆ ಆಗಮಿಸಲಿದ್ದಾರೆ.