ಬೆಂಗಳೂರು: ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆದಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ದೂರು ಸಲ್ಲಿಕೆಯಾಗಿದೆ.
ಕೆಪಿಸಿಸಿ ಮೀಡಿಯಾ ಘಟಕದ ಅಧ್ಯಕ್ಷ ರಮೇಶ್ ಬಾಬು ವಿರುದ್ಧ ಡಿಕೆಶಿಗೆ ದೂರು ಸಲ್ಲಿಕೆಯಾಗಿದೆ. ಕಾಂಗ್ರೆಸ್‌ನ ಯುವ ವಕೀಲರ ಬಳಗದಿಂದ ಡಿ.ಕೆ ಶಿವಕುಮಾರ್‌ಗೆ ದೂರು ಸಲ್ಲಿಸಲಾಗಿದೆ. ಕೆಪಿಸಿಸಿ ಕಾನೂನು ಘಟಕದ ರಾಜ್ಯ ಕಾರ್ಯದರ್ಶಿ ದೂರು ಸಲ್ಲಿಸಿದ್ದಾರೆ.
ವಕೀಲರ ಸಂಘದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ರಮೇಶ್ ಬಾಬು ಕೆಲಸ ಮಾಡುತ್ತಿದ್ದಾರೆ. ರಮೇಶ್ ಬಾಬು, ಜೆಡಿಎಸ್ ಅಭ್ಯರ್ಥಿ ಎ.ಪಿ ರಂಗನಾಥ್ ಗೆ ನೆರವಾಗುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದು ಪಕ್ಷ ವಿರೋಧಿ ಕೆಲಸವಾಗಿದೆ. ಹೀಗಾಗಿ ರಮೇಶ್ ಬಾಬು ಅವರನ್ನು ಪಕ್ಷದಿಂದ ಉಚ್ಛಾಟಿಸಿ ಎಂದು ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ವಕೀಲರ ತಂಡದ ಅಭ್ಯರ್ಥಿ ಆಗಿರುವ ಟಿ ಜೆ. ರವಿಗೆ ಬೆಂಬಲ ನೀಡುತ್ತಿಲ್ಲ. ಜೆಡಿಎಸ್‌ನ ಎ.ಪಿ ರಂಗನಾಥ್‌ಗೆ ಬೆಂಬಲ ಆಗುವಂತೆ ನಡೆದುಕೊಳ್ಳುತ್ತಿದ್ದಾರೆ ಎದು ಆರೋಪಿಸಿದ್ದಾರೆ.
ರಮೇಶ್ ಬಾಬು ಮಾತನಾಡಿರುವ ಆಡಿಯೋ ರಿಲೀಸ್
ವಕೀಲರ ಸಂಘದ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಮನಕ್ಕೆ ತರದೆ ರಮೇಶ್ ಬಾಬು ವಕೀಲರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾವ ಅಭ್ಯರ್ಥಿಯನ್ನು ಬೆಂಬಲಿಸುತ್ತಿಲ್ಲ ಎಂದು ರಮೇಶ್ ಬಾಬು ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.