ಬೆಂಗಳೂರು: ಬೆಂಗಳೂರಿಗೆ ನಾಯಿ ಮಾಂಸ ಬಂದಿರುವ ಆರೋಪವೊಂದು ಕೇಳಿ ಬಂದಿದೆ.
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬ ಆರೋಪವೊಂದು ಕೇಳಿ ಬಂದಿದೆ. ಹೀಗಾಗಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಟನ್ ಬಾಕ್ಸ್ ಗಳನ್ನು ತಡೆದಿದ್ದಾರೆ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್ ಗಳು ಬಂದಿದ್ದು, ಅದರಲ್ಲಿ ಒಟ್ಟು 4,500 ಕೆ.ಜಿ. ಮಾಂಸವಿದೆ ಎಂದು ತಿಳಿದು ಬಂದಿದೆ.
ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು, ಶುಕ್ರವಾರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು, ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿ ಮಾಂಸದ ಬಾಕ್ಸ್ಗಳನ್ನು ತಡೆಹಿಡಿದಿದ್ದಾರೆ. ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ಜೈಪುರ ರೈಲಿನ ಮೇಲೆ ದಾಳಿ ಮಾಡಿದ್ದು, ಮಟನ್ ಮಾಂಸವನ್ನು ಎತ್ತಿ ನೋಡಿದ್ದಾರೆ. ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.
ರೋಲ್ ಕಾಲ್ ಗೆ ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಕುರಿ ಮಾಂಸದ ಜತೆ ನಾಯಿ ಮಾಂಸ ಬೆರೆಸಿದ ಆರೋಪ ಮಾಡಿದ್ದಾನೆ. ಇದು ಅಕ್ರಮ ಬ್ಯುಸಿನೆಸ್ ಅಲ್ಲ. ನಮ್ಮ ಬಳಿ ಎಲ್ಲ ಸರ್ಟಿಫಿಕೇಟ್ ಇದೆ. ಎಲ್ಲ ಬಾಕ್ಸ್ ಗಳಲ್ಲಿ ಕುರಿ ಮಾಂಸ ಮಾತ್ರವಿದೆ. ನಾವು 12 ವರ್ಷದಿಂದ ಈ ಬ್ಯುಸಿನೆಸ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಿಬಿಎಂಪಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿಯಾಗಿ ದೌಡಾಯಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸೇರಿ ಮಾಂಸದ ಬಾಕ್ಸ್ ಗಳನ್ನು ಓಪನ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಗುಣಮಟ್ಡ ಹಾಗೂ ಮಾಂಸ ದೃಢೀಕರಣಕ್ಕಾಗಿ ಸ್ಯಾಂಪಲ್ ಪಡೆದಿದ್ದಾರೆ.
ಈ ವೇಳೆ ಮಾತನಾಡಿದ ಬಿಬಿಎಂಪಿ ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಲ್ಯಾಬ್ ಗೆ ರವಾನಿಸಿ ಪರೀಕ್ಷಿಸಲಾಗುತ್ತದೆ ಎಂದು ಹೇಳಿದ್ದಾರೆ.
ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೆ ಮಾಲೀಕನ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆ ನೀಡಿದ್ದಾರೆ.