ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಹೀಗಾಗಿ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಕೂಡ ಖಡಕ್ ಸೂಚನೆ ನೀಡಿತ್ತು. ಹೈಕೋರ್ಟ್ ಆದೇಶದಂತೆ ಕಂದಾಯ ಇಲಾಖೆ ಅಧಿಕಾರಿಗಳು ಒತ್ತುವರಿ ಕಾರ್ಯಾಚರಣೆ ನಡೆಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರ ಈ ರೀತಿಯ ದಬ್ಬಾಳಿಕೆ ನಡೆಸುತ್ತಿದೆ. ತಪ್ಪು ಮಾಹಿತಿಗಳಿಗೆ ಕಾನೂನು ವ್ಯಾಪ್ತಿಯಲ್ಲಿ ಉತ್ತರ ಕೊಡುತ್ತೇನೆ. ನನಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರಾಜ್ಯ ಸರ್ಕಾರ ಎಸ್ಐಟಿ ಮಾಡಿಕೊಂಡು ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ಗೆ ನಾನೇ ಟಾರ್ಗೆಟ್. 40 ವರ್ಷಗಳ ಹಿಂದೆ ತೆಗೆದುಕೊಂಡ ಜಮೀನಿಗೆ 100 ಬಾರಿ ತನಿಖೆ ಆಗಿದೆ. ನನ್ನದೇ ಈ ರೀತಿಯ ಪರಿಸ್ಥಿತಿ ಆದರೆ, ಜನಸಾಮಾನ್ಯರ ಪರಿಸ್ಥಿತಿ ಏನಾಗಬಾರದು ಎಂದು ಪ್ರಶ್ನೆ ಮಾಡಿದ್ದರೆ.