ನವದೆಹಲಿ: ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧ ಕೇಳಿ ಬಂದಿರುವ ಆರೋಪಗಳು ಸುಳ್ಳು ಎಂದು ಕಂಪನಿ ಸ್ಪಷ್ಟನೆ ನೀಡಿದೆ.
ಅಮೆರಿಕದಲ್ಲಿ ಕೇಳಿ ಬಂದಿರುವ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ಅದಾನಿ ಗ್ರೂಪ್ ಕಂಪನಿ ಇದೇ ಮೊದಲ ಬಾರಿಗೆ ಸ್ಪಷ್ಟನೆ ನೀಡಿದೆ. ಆರೋಪಗಳೆಲ್ಲ ಸುಳ್ಳು ಅದಾನಿ ಗ್ರೀನ್ ಕಂಪನಿ ತಿಳಿಸಿದೆ.
ಅದಾನಿ ಗ್ರೀನ್ ಎನರ್ಜಿ ಷೇರು ಮಾರುಕಟ್ಟೆ ಫೈಲಿಂಗ್ ನಲ್ಲಿ ಸ್ಪಷ್ಟನೆ ನೀಡಿದ್ದು, ಲಂಚದ ಆರೋಪಗಳ ಸುದ್ದಿ ಸುಳ್ಳು ಮತ್ತು ಆಧಾರರಹಿತ ಎಂದು ಹೇಳಿದೆ. ಯುಎಸ್ ಫೆಡರಲ್ ಕರಪ್ಶನ್ ಪ್ರಾಕ್ಟೀಸಸ್ ಆಕ್ಟ್ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂಬ ಸುದ್ದಿ ಸಂಪೂರ್ಣವಾಗಿ ಸುಳ್ಳು ಎಂದು ಹೇಳಿದೆ.
ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಮತ್ತು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಕೂಡ ಅದಾನಿ ಬೆಂಬಲಕ್ಕೆ ನಿಂತಿದ್ದಾರೆ. ನ್ಯೂಯಾರ್ಕ್ನ ಫೆಡರಲ್ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಗೌತಮ್ ಅದಾನಿ ಕಂಪನಿಯು ಅಮೆರಿಕದ ಹೂಡಿಕೆದಾರರನ್ನು ವಂಚಿಸಿದೆ ಎಂದು ಆರೋಪಿಸಿದ ಬಗ್ಗೆ ವರದಿಯಾಗಿತ್ತು. ಸೌರ ಶಕ್ತಿ ಯೋಜನೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಮೌಲ್ಯದ ಲಂಚವನ್ನು ನೀಡಲಾಗಿದೆ ಎಂದು ಆರೋಪಿಸಲಾಗಿತ್ತು. ಸದ್ಯ ಇದು ಸುಳ್ಳು ಎಂದು ಕಂಪನಿ ಹೇಳಿದೆ.