ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

August 5, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಕೆಎಸ್‌ಪಿಸಿಬಿ) ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನಡೆದಿರುವ ಶಾಶ್ವತ ವಿಲೀನ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಮಗ್ರ ತನಿಖೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ.

ಬಿಎಂಟಿಸಿ ಉದ್ಯೋಗಿಯಾಗಿರುವ ಮುನಿರಾಜು ಟಿ. ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆಗೆ ಶಾಶ್ವತವಾಗಿ ವಿಲೀನಗೊಳಿಸುವ ವೇಳೆ ಜಲ (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ–1974, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೃಂದ ಮತ್ತು ನೇಮಕಾತಿ ನಿಯಮಾವಳಿ–1992, ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳು–1977, ಕೆಎಸ್‌ಆರ್‌ಟಿಸಿ ನೇಮಕಾತಿ ನಿಯಮಗಳು–1982 ಸೇರಿದಂತೆ ಹಲವು ಕಾನೂನು ಹಾಗೂ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸಲಾಗಿದೆ.

ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಪಡೆದ ದಾಖಲೆಗಳು, ಕಡತ ಟಿಪ್ಪಣಿಗಳು ಹಾಗೂ ಸರ್ಕಾರದ ಆದೇಶಗಳ ಪರಿಶೀಲನೆಯಿಂದ, ಈ ಶಾಶ್ವತ ವಿಲೀನ ಪ್ರಕ್ರಿಯೆ ಕಾನೂನುಬದ್ಧ ಅಧಿಕಾರದ ವ್ಯಾಪ್ತಿಯನ್ನು ಮೀರಿ ಹಾಗೂ ಪೂರ್ವನಿಯೋಜಿತ ಉದ್ದೇಶದಿಂದ ನಡೆಸಲಾಗಿದೆ ಎಂಬ ಗಂಭೀರ ಅನುಮಾನಗಳು ವ್ಯಕ್ತವಾಗಿವೆ ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

1992ರ ನೇಮಕಾತಿ ನಿಯಮಾವಳಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ ಹಾಗೂ ಬಡ್ತಿ ಮಾತ್ರ ಅವಕಾಶವಿದ್ದರೂ, ನಂತರ “Absorption” (ಶಾಶ್ವತ ವಿಲೀನ) ವಿಧಾನವನ್ನು ಸೇರಿಸಿ ಒಬ್ಬ ವ್ಯಕ್ತಿಗೆ ಅನುಕೂಲವಾಗುವಂತೆ ನಿಯಮ ತಿದ್ದುಪಡಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಅಧಿಸೂಚನೆ, ಅರ್ಜಿ ಆಹ್ವಾನ, ಸ್ಪರ್ಧಾತ್ಮಕ ಆಯ್ಕೆ, ಮೀಸಲಾತಿ ರೋಸ್ಟರ್ ಸೇರಿದಂತೆ ಕಡ್ಡಾಯ ಪ್ರಕ್ರಿಯೆಗಳನ್ನು ಪಾಲಿಸದೇ ನೇಮಕಾತಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಆಗಿನ ಸಚಿವರ ಸೂಚನೆಯ ಬಳಿಕವೇ ನಿಯೋಜನೆ, ನಿಯಮ ತಿದ್ದುಪಡಿ, ಸರ್ಕಾರದ ಅನುಮೋದನೆ ಹಾಗೂ ಅಂತಿಮವಾಗಿ ಶಾಶ್ವತ ವಿಲೀನದ ಕ್ರಮಗಳು ನಡೆದಿವೆ. ಇದರಿಂದ ರಾಜಕೀಯ ಪ್ರಭಾವ, ಅಧಿಕಾರ ದುರುಪಯೋಗ, ಕಡತ ಟಿಪ್ಪಣಿಗಳ ತಿರುಚುವಿಕೆ ಹಾಗೂ ಕಾನೂನು ಇಲಾಖೆಯ ಅಭಿಪ್ರಾಯ ನಿರ್ಲಕ್ಷ್ಯಗೊಂಡಿರುವ ಅನುಮಾನಗಳು ಮೂಡಿವೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ, ಬಿಎಂಟಿಸಿ ದಾಖಲೆಗಳಲ್ಲಿ ಬೇರೆ ಸ್ವಾಯತ್ತ ಸಂಸ್ಥೆಗೆ ಶಾಶ್ವತ ವಿಲೀನಕ್ಕೆ ಅವಕಾಶವಿಲ್ಲ ಎಂದು ಆರಂಭಿಕ ಅಭಿಪ್ರಾಯ ದಾಖಲಿಸಿದ್ದರೂ, ನಂತರದ ಕಡತಗಳಲ್ಲಿ ಆ ಅಭಿಪ್ರಾಯವನ್ನು ಮರೆಮಾಚಿ ಅನುಮೋದನೆ ಪಡೆಯಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 25-02-2022ರ ನೇಮಕಾತಿ ನಿಯಮ ತಿದ್ದುಪಡಿ, ಸರ್ಕಾರದ ಅನುಮೋದನೆ, ಬಿಎಂಟಿಸಿ ಬಿಡುಗಡೆ ಆದೇಶ ಹಾಗೂ 04-02-2023ರಂದು ಹೊರಡಿಸಲಾದ ಶಾಶ್ವತ ವಿಲೀನ ಆದೇಶವನ್ನು ರದ್ದುಪಡಿಸಬೇಕು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ, ಕ್ರಿಮಿನಲ್ ಪ್ರಕರಣ ಹಾಗೂ ಭ್ರಷ್ಟಾಚಾರ ಸಂಬಂಧಿತ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಪ್ರಕರಣವನ್ನು ಸಾಮಾನ್ಯ ಇಲಾಖಾ ತನಿಖೆಗೆ ಸೀಮಿತಗೊಳಿಸದೆ, ಸ್ವತಂತ್ರ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸಿ, ಕಾನೂನುಬಾಹಿರ ನೇಮಕಾತಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!

SendShareTweet
Previous Post

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!

Next Post

KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!

KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat