ಕಾರವಾರ: ಆರೋಪಿಗಳಿಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿ, ಈಗ ಆಸ್ಪತ್ರೆ ಪಾಲಾಗಿದ್ದಾರೆ.
ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಅಂಕೋಲಾ (Ankola) ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಆರೋಪಿಗಳನ್ನು ಮಂಗಳೂರು (Mangaluru) ಮೂಲದ ತಲ್ಲತ್ತ ಮತ್ತು ನವಫಾಲ್ ಎನ್ನಲಾಗಿದೆ. ಆರೋಪಿಗಳು ಜ.29 ರಂದು ರಾಮನಗುಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದ್ದ ಕಾರಿನಲ್ಲಿ ಸಿಕ್ಕ ಒಂದು ಕೋಟಿ ರೂ. ಪ್ರಕರಣದಲ್ಲಿ ಬಂಧಿತರಾಗಿದ್ದರು.
ಸ್ಥಳ ಮಹಜರಿಗಾಗಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಮೂವರು ಪೊಲೀಸರ ಕಾಲಿಗೆ ಮತ್ತು ತಲೆಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಳಿಯಾಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಂದ ಕಾರಿನಲ್ಲಿ ಪತ್ತೆಯಾಗಿದ್ದ ದುಡ್ಡನ್ನು ಕಳ್ಳತನದ್ದು ಇರಬಹುದು ಎಂದು ಶಂಕಿಸಲಾಗಿದೆ.