ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಪ್ರೋಟೋಕಾಲ್ ಉಲ್ಲಂಘಿಸಲಾಗಿದೆ ಎನ್ನಲಾಗುತ್ತಿದೆ. ಡಿ ಕುಮಾರಸ್ವಾಮಿ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದ ವೇಳೆ ಸರ್ಕಾರ ಕಾರು ನೀಡದೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿ ಬಂದಿದೆ.
ಹೀಗಾಗಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಾಹನದಲ್ಲೇ ಮಂಡ್ಯ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ನನಗೆ ಇಲ್ಲಿವರೆಗೂ ಕಾರು ಕೊಟ್ಟಿಲ್ಲ. ಹೀಗಾಗಿ, ನಮ್ಮ ಕೇಂದ್ರ ಸರ್ಕಾರದ ವಾಹನ ಬಳಕೆ ಮಾಡುತ್ತಿದ್ದೇನೆ. ಬೃಹತ್ ಕೈಗಾರಿಕಾ ಇಲಾಖೆಯ ವಾಹನ ತರಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ದಿಶಾ ಸಭೆ ನಡೆಯಲಿದೆ. ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ಸಭೆ ಆರಂಭವಾಗಲಿದೆ. ದಿಶಾ ಸಭೆಯ ನಂತರ ಕುಮಾರಸ್ವಾಮಿ ಸಂಜೆ 4 ಗಂಟೆಗೆ ಮೈಸೂರಿನ ಸಾರಾ ಕನ್ವೆಂಷನ್ ಹಾಲ್ನಲ್ಲಿ ಜೆಡಿಎಸ್ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ.