ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನಗೊಳಿಸಿರುವ ಘಟನೆ ತಡರಾತ್ರಿ ನಡೆದಿದೆ.
ಗ್ರಾಮದ ದೇವಸ್ಥಾನವೊಂದರ ಗೋಡೆಯ ಮೇಲಿರುವ ಗ್ರಾನೈಟ್ ಮೇಲಿನ ಅಂಬೇಡ್ಕರ್ ಭಾವಚಿತ್ರದ ಮೇಲೆ ಕಿಡಿಗೇಡಿಗಳು ಸಗಣಿ ಎಸೆದು ವಿಕೃತಗೊಳಿಸಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ಕೂಡಲೇ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ತಡಸ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದಿವರೆಸಿದ್ದಾರೆ.
ಇದನ್ನೂ ಓದಿ : ಅರೆಸ್ಟ್ ಆದ್ರೂ ಖುಷಿ ಖುಷಿಯಲ್ಲೇ ಬೆಂಬಲಿಗರನ್ನು ಮಾತಾಡಿಸಿದ ರಾಜೀವ್ ಗೌಡ



















