ಬಾಗಲಕೋಟೆ : ಆ್ಯಂಬುಲೆನ್ಸ್-ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆ್ಯಂಬುಲೆನ್ಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬಾಗಲಕೋಟೆಯ ನವನಗರದ KSRTC ಸರ್ಕಲ್ ಬಳಿ ನಡೆದಿದೆ.
ಡಿಕ್ಕಿಯ ರಭಸಕ್ಕೆ ರೋಗಿ ಇದ್ದ ಆ್ಯಂಬುಲೆನ್ಸ್ ಉರುಳಿ ಬಿದ್ದಿದೆ. ಬಳಿಕ ರೋಗಿ ರಕ್ಷಣೆಗೆ ಸಾರ್ವಜನಿಕರು ದೌಡಾಯಿಸಿದ್ದಾರೆ ಎನ್ನಲಾಗಿದೆ. ಅದೃಷ್ಟವಶಾತ್ ಆ್ಯಂಬುಲೆನ್ಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆಯೇ ಹೊರತು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆ ಬಾಗಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಸಿಲಿಂಡರ್ ಲಾರಿ ಪಲ್ಟಿ.. ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್ ಸವಾರರು!


















