ದೇಶದ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಜಾರ್ಖಂಡ್ ನಲ್ಲೂ ಚುನಾವಣೆ ಘೋಷಣೆಯಾಗಿದ್ದು, ಭರ್ಜರಿ ಪ್ರಚಾರ ನಡೆಸಿರುವ ಬಿಜೆಪಿ, ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ವೇಳೆ ಗೃಹ ಸಚಿವ ಅಮಿತ್ ಶಾ ಅವರು ಬಾಂಗ್ಲಾದೇಶ ನುಸುಳುಕೋರರಿಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಅಕ್ರಮ ನುಸುಳುಕೋರರನ್ನು ಮಟ್ಟ ಹಾಕಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಬಾಂಗ್ಲಾದೇಶಿ ನುಸುಳುಕೋರರಿಂದ ಬುಡಕಟ್ಟು ಜನಸಂಖ್ಯೆಯಲ್ಲಿ ತೀವ್ರ ಕುಸಿತ ಉಂಟಾಗುತ್ತಿದೆ. ಬುಡಕಟ್ಟು ಜನರಿಗೆ ಸೇರಿರುವ ಭೂಮಿಯನ್ನು ನುಸುಳುಕೋರರಿಗೆ ಹಸ್ತಾಂತರಿಸುವುದನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ಮಹಿಳೆಯರಿಗೆ ಚಿತ್ರಹಿಂಸೆ ನೀಡಿದ ನುಸುಳುಕೋರರನ್ನು ತಲೆಕೆಳಗಾಗಿ ನೇತುಹಾಕಲಾಗುವುದು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ನುಸುಳುಕೋರರನ್ನು ತಡೆಯಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು ಮಹಿಳೆಯರಿಂದ ಕಿತ್ತುಕೊಂಡಿರುವ ಭೂಮಿಯನ್ನು ವಾಪಸ್ ಕೊಡಿಸಲು ಕಾನೂನು ತರಲಾಗುವುದು. ಜಾರ್ಖಂಡ್ ನಲ್ಲಿ ಪ್ರತಿ ಪದವೀಧರ ಮತ್ತು ಸ್ನಾತಕೋತ್ತರ ಪದವೀಧರ ಯುವಕರಿಗೆ ತಿಂಗಳಿಗೆ 2 ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.