ಅಹಮದಾಬಾದ್: ಇಡೀ ಭಾರತ ದೇಶವೇ ಇಂದು ಮಮ್ಮಲ ಮರುಗುತ್ತಿದೆ. ವಿಮಾನ ದುರಂತ ಇಡೀ ಭಾರತೀಯರ ಕಣ್ಣನ್ನು ಒದ್ದೆ ಮಾಡಿದೆ. ವಿಮಾನದಲ್ಲಿದ್ದ 242 ಜನರ ಪೈಕಿ 241 ಜನರು ಹಾಗೂ ವಿದ್ಯಾರ್ಥಿಗಳು ಇಂದು ಬಲಿಯಾಗಿದ್ದಾರೆ. ಈ ದುರಂತ ನಡೆದ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಸಿಎಂ, ರಾಜ್ಯದ ಗೃಹ ಸಚಿವರು ಮತ್ತು ಡಿಜಿಪಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ದುರಂತದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು, ನಾಗರಿಕ ವಿಮಾನಯಾನ ಸಚಿವ ಮುರಳೀಧರ್ ಮೊಹೋಲ್ ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಸೇರಿದಂತೆ ಹಲವರು ಇದ್ದರು.
ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಈಗಾಗಲೇ ಟಾಟಾ ಗ್ರೂಪ್ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 1 ಕೋಟಿ ರೂ. ಪರಿಹಾರ ಘೋಷಿಸಿದೆ.