ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‍ನಲ್ಲಿ ಭಯೋತ್ಪಾದಕ (Pahalgam Terrorist Attack) ದಾಳಿ ನಡೆದಿದ್ದು, ಗೃಹ ಸಚಿವ ಅಮಿತ್ ಶಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೇ, ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.
ಉಗ್ರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಸ್ಥಳಕ್ಕೆ ಭೇಟಿ ನೀಡುವಂತೆ ಉಗ್ರರ ದಾಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ಸೂಚಿಸಿದ ಹಿನ್ನೆಲೆಯಲ್ಲಿ ಆಗಮಿಸಿದ್ದರು. ಶ್ರೀ ನಗರಕ್ಕೆ ತೆರಳುವ ಮುನ್ನ ಅಮಿತ್ ಶಾ (Amit Shah) ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಈ ಬಗ್ಗೆ ಸಭೆ ಕರೆದಿದ್ದರು.
ಸಭೆಯಲ್ಲಿ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಭಾಗವಹಿಸಿದ್ದರು ಎನ್ನಲಾಗಿದೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನ್ನಪ್ಪಿದ್ದಾರೆ. ಅಲ್ಲದೇ, ಒಟ್ಟಾರೆ 30ಕ್ಕೂ ಅಧಿಕ ಜನರು ದಾಳಿಯಲ್ಲಿ ಬಲಿಯಾಗಿದ್ದಾರೆ.



















