ಬೆಂಗಳೂರು: ಮಂತ್ರಾಲಯ ಪರಿಮಳ ಪ್ರಶಸ್ತಿಗೆ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘ, ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಅಮೃತರಾಜ್ ಆಯ್ಕೆಯಾಗಿದ್ದಾರೆ.
ಮಂತ್ರಾಲಯ ಕ್ಷೇತ್ರದಲ್ಲಿ ಮಾರ್ಚ್ 7ರಂದು ಸಂಜೆ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಮೃತರಾಜ್ ಅವರು ಹಲವಾರು ಸಮಾಜಮುಖಿ ಹಾಗೂ ಸಂಘದ ಪರ ಹೋರಾಟಗಳನ್ನು ನಡೆಸಿ, ನ್ಯಾಯ ಒದಗಿಸುವ ಕಾರ್ಯ ಮಾಡಿದ್ದರು. ಮಹಾನಗರ ಪಾಲಿಕೆಗಳ ನೌಕರರ ಹಾಗೂ ಅಧಿಕಾರಿಗಳ ಕ್ಷೇಮಕ್ಕಾಗಿ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಈ ಪ್ರಶಸ್ತಿ ಹುಡುಕಿಕೊಂಡು ಬಂದಿದೆ. ಪ್ರಶಸ್ತಿ ಘೋಷಣೆ ಮಾಡಿ ಮಠದಿಂದ ಆದೇಶ ಹೊರಡಿಸಲಾಗಿದೆ.