ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಹೆಬ್ಬಾಳ ಫೈ ಓವರ್ ರಸ್ತೆ ಬಳಿ ಅಪಘಾತವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಬ್ಬಿಣ ತುಂಬಿದ್ದ ಲಾರಿ ಹಾಗೂ ಸ್ಲೀಪರ್ ಕೋಚ್ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾದ ಕುರಿತು ವರದಿಯಾಗಿಲ್ಲ. ಆದರೆ, ಬಸ್ ನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
40 ಟನ್ ಕಬ್ಬಿಣ ತುಂಬಿದ್ದ ಲಾರಿಯಿಂದ ಬಸ್ ಗೆ ಡಿಕ್ಕಿಯಾಗಿದೆ. ವೇಗವಾಗಿ ಬಂದ ಲಾರಿ ಕಂಟ್ರೋಲ್ ಸಿಗದೆ ಮುಂದೆ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ.