ನಟ ತಾಂಡವ್ ರಾಮ್ ಕೊಲೆಗೆ ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ನಗರದ ಚಂದ್ರಾ ಲೇಔಟ್ ನಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ತಾಂಡವ್ ರಾಮ್ ನನ್ನು ಬಂಧಿಸಿದ್ದಾರೆ. ನಟ ಕೆಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ನಿರ್ದೇಶಕ ಭರತ್ ನಿರ್ದೇಶನ ಮಾಡುತ್ತಿದ್ದ ಸಿನಿಮಾದಲ್ಲಿ ಆರೋಪಿ ನಟ ನಟಿಸುತ್ತಿದ್ದರು. ಆದರೆ, ಆ ಸಿನಿಮಾವನ್ನು ನಿರ್ದೇಶಕರು ನಿಲ್ಲಿಸಿದ್ದರು. ಇದರಿಂದ ಕೋಪಗೊಂಡ ಆರೋಪಿ ಗುಂಡು ಹಾರಿಸಿ ಬೆದರಿಕೆ ಹಾಕಿದ್ದಾರೆ. ಆನಂತರ ಕೊಲ್ಲಲು ಯತ್ನಿಸಿದ್ದಾರೆ. ಈ ಕುರಿತು ಭರತ್ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಂಡವ್ ರಾಮ್ ನಾಯಕನಾಗಿ ನಟಿಸುತ್ತಿದ್ದ ‘ದೇವನಾಂಪ್ರಿಯ’ ಹೆಸರಿನ ಸಿನಿಮಾ ಸಿದ್ಧವಾಗುತ್ತಿತ್ತು. ಈ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ಭರತ್ ವಹಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ಸಿನಿಮಾದ ಕಾರ್ಯವನ್ನು ನಿರ್ದೇಶಕರು ನಿಲ್ಲಿಸಿದ್ದಾರೆ. ನಿರ್ದೇಶನಕ್ಕಾಗಿ ಭರತ್, ತಾಂಡವ್ ರಾಮ್ ಕಡೆ 6 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ. ಹೀಗಾಗಿ ಚಿತ್ರದ ನಿರ್ಮಾಪಕರು ಸಭೆ ಕರೆದಿದ್ದರು. ಈ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ.