ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಯುವತಿಯರಿಗೆ ಮರ್ಮಾಂಗವನ್ನು ತೋರಿಸಿ ಪರಾರಿಯಾಗಿದ್ದ ವಿಕೃತ ಕಾಮುಕನನ್ನು ಬೆಂಗಳೂರಿನ ವಿವಿಪುರಂ ಪೊಲೀಸರು ಬಂಧಿಸಿದ್ದಾರೆ.
ಅಯೂಬ್ ಉರ್ ರೆಹಮಾನ್(48) ಬಂಧಿತ ವಿಕೃತ ಕಾಮಿ. ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಈ ರೀತಿ ಮಾಡಿ ಪರಾರಿಯಾಗುತ್ತಿದ್ದವನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಬೈಕ್ ನಲ್ಲಿ ಬರುವ ಕಾಮುಕ ಉರ್ ರೆಹಮಾನ್, ವಿ.ವಿ. ಪುರಂ ರಸ್ತೆಯಲ್ಲಿ ಓಡಾಡುವ ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡುತ್ತಿದ್ದ. ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಆ ರಸ್ತೆಗೆ ಇಳಿಯುವ ಕಾಮುಕ, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿರುವ ಕಡೆ ಬೈಕ್ ನಿಲ್ಲಿಸಿ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಈತನ ಕೃತ್ಯದಿಂದಾಗಿ ಯುವತಿಯರು ರೋಸಿ ಹೋಗಿದ್ದರು. ಕೆಲ ವಿದ್ಯಾರ್ಥಿನಿಯರು ಕಾಮುಕನ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಅಯೂಬ್, ಕಲಾಸಿಪಾಳ್ಯದಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿಯನ್ನು ವಿಚಾರಣೆಗೊಳಪಡಿಸಿದ್ದಾರೆ.
