ಇನ್ನು ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ ರಚನೆ ಮಾಡಿರುವುದನ್ನು ಧರ್ಮಸ್ಥಳ ಸ್ವಾಗತಿಸಿದೆ. ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಅದೇ ದಿನ ಮಾಧ್ಯಮ ಪ್ರಕಟಣೆ ನೀಡಿದ್ದರು. ಸದ್ಯ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದಿರುವ ಅಧಿಕಾರಿಗಳು ಫೀಲ್ಡಿಗಿಳಿದ್ದಾರೆ. ಕದ್ರಿಯ ಐಬಿಯಲ್ಲಿರುವ ಅನಾಮಿಕ ವ್ಯಕ್ತಿ ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಎಸ್‌ಐಟಿ ಅಧಿಕಾರಿ ಅನುಚೇತ್ ಮತ್ತು ಜಿತ್ರೇಂದ್ರ ದಯಾಮ ಅನಾಮಿಕ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದು, ಕ್ಯಾಮೆರಾ ಮುಂದೆ ಹೇಳಿಕೆ ದಾಖಲಿಸಿದ್ದಾರೆ.


















