ನವದೆಹಲಿ: ಇಂದು ಸಂಸತ್ ನಲ್ಲಿ ಉದ್ವಿಗ್ನ ವಾತಾವರಣ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸತ್ತಿನಲ್ಲಿ ನಿರ್ಣಾಯಕ ವಿಷಯಗಳನ್ನು ಎತ್ತುವ ವಿರೋಧ ಪಕ್ಷದ ಪ್ರಯತ್ನಗಳಿಗೆ ಆಡಳಿತ ಪಕ್ಷದ ಸಂಸದರು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ. ಅಂಬೇಡ್ಕರ್ ವಿವಾದದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಇಂತಹ ತಂತ್ರಗಳನ್ನು ಬಳಸುತ್ತಿದೆ. ಸಂಸತ್ ಆವರಣದಲ್ಲಿ ಭಾರೀ ಕೋಲಾಹಲ ಏರ್ಪಟ್ಟಿತು.
ಸಂಸತ್ತಿನ ಪ್ರವೇಶದ ಮೆಟ್ಟಿಲುಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮಹಿಳಾ ಸಂಸದೆಯ ಮೇಲೆ ಬಲಪ್ರಯೋಗ ಮಾಡಿದ್ದಾರೆ. ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಆಡಳಿತ ಪಕ್ಷವು “ಅಂಬೇಡ್ಕರ್ ವಿರೋಧಿ ಮತ್ತು ಸಂವಿಧಾನ ವಿರೋಧಿ” ಸಿದ್ಧಾಂತಕ್ಕೆ ಬದ್ಧವಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ವಿರೋಧ ಪಕ್ಷದ ನಾಯಕರು ಸಂಸತ್ತಿಗೆ ಪ್ರವೇಶಿಸದಂತೆ ಬಿಜೆಪಿ ಸಂಸದರು ಪ್ರಯತ್ನಿಸಿದರು ಎಂದು ಆರೋಪಿಸಿದ್ದಾರೆ.