ಕೊಪ್ಪಳ: ಇಂದು ರಾಹುಗ್ರಹಸ್ತ ರಕ್ತಚಂದ್ರಗ್ರಹಣ ಗೋಚರವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಹಲವು ದೇಗುಲಗಳು ಬಂದ್ ಆಗಲಿದ್ದು, ಪೂಜೆ, ದರ್ಶನದ ಸಮಯದಲ್ಲೂ ಬದಲಾವಣೆಯಾಗಿದೆ.
ಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನ ಬಂದ್ ಮಾಡಲಾಗಿದೆ. ಸಂಜೆ 5 ಗಂಟೆಯಿಂದ ಭಕ್ತರಿಗೆ ದೇವಿ ದರ್ಶನವಿರುವುದಿಲ್ಲ. ನಾಳೆ ಬೆಳಗ್ಗೆ ದೇವಿಗೆ ಅಭಿಷೇಕ ನಂತರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆಂಜನೇಯನ ಜನ್ಮ ಸ್ಥಳ ಅಂಜನಾದ್ರಿಯಲ್ಲಿ ದೇವರ ಬಾಗಿಲು ಬಂದ್ ಮಾಡಲಾಗುತ್ತದೆ. ಸಂಜೆ 7 ಗಂಟೆಯಿಂದ ಆಂಜನೇಯನ ದರ್ಶನಕ್ಕೆ ಅವಕಾಶವಿರುವುದಿಲ್ಲ. ನಾಳೆ ಬೆಳಗ್ಗೆಯಿಂದ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.